ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ದೇಶದ ಪ್ರಧಾನಿಯಂತಹ ಉನ್ನತ ಸ್ಥಾನಕ್ಕೇರಿರುವುದು ಪ್ರತಿಯೊಬ್ಬ ಕನ್ನಡಿಗನಿಗೆ ಹೆಮ್ಮೆ ತರುವಂತಹ ಸಂಗತಿಯಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೇಳಿದ್ದಾರೆ. ಎಚ್.ಡಿ. ದೇವೇಗೌಡ ಸಮುದಾಯ ಭವನ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ, ದೇವೇಗೌಡರ ಜೊತೆ ಒಟ್ಟಾಗಿ ವೇದಿಕೆ ಹಂಚಿಕೊಂಡಿರುವುದು ಕೆಲವರಲ್ಲಿ ಕುತೂಹಲ ಮೂಡಿಸಿದೆ ಎಂದರು. 1960 ರಲ್ಲಿ ನಾನು ದೇವೇಗೌಡ ಒಟ್ಟಾಗಿ ರಾಜಕೀಯಕ್ಕೆ ಬಂದಿದ್ದೇವೆ. ಮಂಡ್ಯ