ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವ ಭ್ರಮೆಯಲ್ಲಿದೆ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಜನತೆ ತೀರ್ಮಾನಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿನಿಂದಲೂ ಜೆಡಿಎಸ್ ಪಕ್ಷದ ಬಗ್ಗೆ ತಾತ್ಸಾರದ ಮಾತುಗಳನ್ನಾಡುತ್ತಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್ ಪಕ್ಷ ಬಿಟ್ಟು ಹೋದ ನಂತರ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು ಎನ್ನುವುದು ಅವರು ಮರೆಯಬಾರದು ಎಂದು ಟಾಂಗ್ ನೀಡಿದ್ದಾರೆ.