ಇಡೀ ದೇಶವೇ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮಾಚರಣೆಯಲ್ಲಿದೆ. ಇಡೀ ದೇಶವೇ ಒಂದು ರೀತಿ ತ್ರಿವರ್ಣದಲ್ಲಿ ಕಂಗೊಳಿಸುತ್ತಿದೆ. ಈಗ ದೇಶದ ಪ್ರತಿ ಮನೆಗಳಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಲಾಗುತ್ತಿದೆ. ದೇಶಭಕ್ತಿ ಗೀತೆಗಳು ಎಲ್ಲೆಲ್ಲೂ ಮೊಳಗುತ್ತಿವೆ. 75ನೇ ಈ ಸ್ವಾತಂತ್ರ್ಯ ಸಂಭ್ರಮಾಚರಣೆಗೆ ದೇಶದಾದ್ಯಂತ ಹೊಸ ಸಂಚಲನ ಮೂಡಿಸಿದೆ. ಇದೆಲ್ಲದರ ನಡುವೆ ಭಾರತಕ್ಕೆ ಮೂರು ಐಸಿಸಿ ಟ್ರೋಫಿ ಗೆದ್ದುಕೊಟ್ಟ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಖಾತೆಯ ಡಿಪಿಯಲ್ಲಿ ಭಾರತದ