ಬೆಂಗಳೂರು: ಮತ್ತೊಮ್ಮೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೇರಿದಷ್ಟು ಸುಲಭವಾಗಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗುತ್ತಾ ಎನ್ನುವುದೇ ಎಲ್ಲರ ಪ್ರಶ್ನೆ.2018 ರಲ್ಲೂ ಹೀಗೇ ಆಗಿತ್ತು. ಯಡಿಯೂರಪ್ಪ ಅಧಿಕಾರಕ್ಕೇರಿದ ಎರಡೇ ದಿನದಲ್ಲಿ ಬಹುಮತ ಸಾಬೀತುಪಡಿಸಲಾಗದೇ ಅಧಿಕಾರದಿಂದ ಕೆಳಗಿಳಿಯಬೇಕಾಯಿತು. ಈಗಲೂ ಬಿಜೆಪಿಗೆ ಸಂಖ್ಯಾ ಬಲವಿಲ್ಲದೇ ಅಧಿಕಾರಕ್ಕೇರಿ ಯಡಿಯೂರಪ್ಪ ಮತ್ತೆ ತಪ್ಪು ಮಾಡಿದರಾ ಎಂಬ ಚರ್ಚೆಯನ್ನು ಜನರೇ ಸೋಷಿಯಲ್ ಮೀಡಿಯಾದಲ್ಲಿ ನಡೆಸುತ್ತಿದ್ದಾರೆ.ಇದು ಬಹುಶಃ ಹೈಕಮಾಂಡ್ ನಿರ್ದೇಶನದಂತೆ ನಡೆದ