ಸಿಎಂ ಆಪ್ತರ ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಬಸವರಾಜ ಹೊರಟ್ಟಿ ಹೇಳಿಕೆ ನೀಡಿದ್ದಾರೆ.ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿಕೆ ನೀಡಿದ್ದು, ಐಟಿ ದಾಳಿ ರಾಜಕೀಯ ಪ್ರೇರಿತವಾಗಿದೆ.ಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಐಟಿ ದಾಳಿ ಮಾಡುವುದು ಇನ್ನೊಬ್ಬರನ್ನ ಕಟ್ಟಿ ಹಾಕಲು ಅದಕ್ಕಾಗಿಯೇ ಐಟಿ ದಾಳಿ ಮಾಡಲಾಗಿದೆ. ಕೇಂದ್ರ ಸರ್ಕಾರದ ಕೈಯಲ್ಲಿ ಐಟಿ ಇದೆ. ಕೇಂದ್ರ ಸರ್ಕಾರ ತಮಗೆ ಹೇಗೆ ಬೇಕು ಹಾಗೆ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ