ಬಿಜೆಪಿಗೆ ಹಿರಿಯ ಕಾಂಗ್ರೆಸ್ ಮುಖಂಡ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಸೆಳೆಯುವ ಪ್ರಯತ್ನ ಮಾಡಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿಯನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ. ಅಂತಹ ಯಾವುದೇ ಪ್ರಸ್ತಾವನೆ ಬಿಜೆಪಿ ಅಜೆಂಡಾದಲ್ಲಿ ಇಲ್ಲ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹೇಳಿಕೆ ಆಧಾರರಹಿತವಾಗಿದೆ. ಅವರು ಯಾವ ಕಾರಣಕ್ಕೆ ಇಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು