ಬೆಂಗಳೂರು : ಮೂವರು ಅತೃಪ್ತ ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿರುವುದನ್ನು ಸ್ವಾಗತಿಸುವುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ. ಪಕ್ಷಾಂತರ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಶೆಡ್ಯೂಲ್ 10ರ ಪ್ರಕಾರ ಕಾಂಗ್ರೆಸ್ನ ಮೂವರು ಶಾಸಕರಾದ ರಾಣೇಬೆನ್ನೂರು ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರನ್ನು ಸ್ಪೀಕರ್ ರಮೇಶ್ ಕುಮಾರ್ ನಿನ್ನೆ ಅನರ್ಹಗೊಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಪಕ್ಷ ವಿರೋಧಿ