ಕಾಂಗ್ರೆಸ್ ಭ್ರಷ್ಟಾಚಾರದ ಕಡತಗಳನ್ನ ತೆಗೆಯುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎಷ್ಟು ವರ್ಷವಾಗಿದೆ. ಈ ಹಿಂದೆ ವಿರೋಧ ಪಕ್ಷದಲ್ಲಿ ಬಿಜೆಪಿಯವರು ಇರಲಿಲ್ವಾ? ಆಗ ಏಕೆ ಇವರು ಭ್ರಷ್ಟಾಚಾರದ ಬಗ್ಗೆ ಕೇಳಿಲ್ಲವೆಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ನಿಮ್ಮ ಬಾಯಲ್ಲಿ ಕಡುಬು ಸಿಕ್ಕಿಹಾಕಿಕೊಂಡಿತ್ತಾ? ಇಷ್ಟು ದಿನ ಬಿಜೆಪಿ ನಾಯಕರು ಕಡ್ಲೆಪುರಿ ತಿನ್ನುತ್ತಿದ್ದರಾ? ನಾವು ಈಗ ಭ್ರಷ್ಟಾಚಾರದ ವಿರುದ್ಧ