ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರಿಗೆ ಆಪರೇಷನ್ ಕಮಲ ಮೂಲಕ ಗಾಳಹಾಕಲು ಯತ್ನಸಿರುವ ಬಿ.ಎಸ್. ಯಡಿಯೂರಪ್ಪನವರ ಆಡಿಯೋ ಅಸಲಿಯೋ ನಕಲಿಯೋ ಎಂಬುದು ಗೊತ್ತಾಗಲಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಿಲೀಸ್ ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪನವರ ಆಡಿಯೋ ತುಣುಕನ್ನು ಎಫ್ ಎಸ್ ಎಲ್ ಗೆ ಕಳಿಸಲಾಗುವುದು. ಆಗ ಅದು ಅಸಲಿಯೋ ನಕಲಿಯೋ ಎಂಬುದು ಗೊತ್ತಾಗಲಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಶಾಸಕರಿಗೆ ಹಣದ ಆಮಿಷ ತೋರಿಸಿರುವ ಆಡಿಯೋದ ಪರೀಕ್ಷಾ ವರದಿಯನ್ನು ಎಫ್ ಎಸ್