ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರಗಳನ್ನು ಬಯಲಿಗೆಳೆದಿದ್ದ ಡಿಐಜಿ ರೂಪಾ ಅವರ ವರ್ಗಾವಣೆಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ರೂಪಾ ಅವರನ್ನು ವರ್ಗಾವಣೆ ಮಾಡುವ ಉದ್ದೇಶವಿದ್ದರಿಂದ ನೆಪಕ್ಕೆ ಮಾತ್ರ ಐವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸರಕಾರ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಜನತೆ ಎಲ್ಲವನ್ನು ನೋಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು