ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿದ ಬೆನ್ನಲ್ಲೇ ಹಲವೆಡೆ ಬಸ್ ಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ.ಮಂಗಳೂರಿನ ವಿವಿಧೆಡೆ ಬಸ್ ಗೆ ಕಲ್ಲು ತೂರಿದ ಘಟನೆ ನಡೆದಿದೆ. ಮಂಗಳೂರಿನ ಫಳ್ನೀರ್ ಮತ್ತು ನಂದಿಗುಡ್ಡೆಯಲ್ಲಿ ಸಂಚರಿಸುತ್ತಿದ್ದ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ.ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಂಕನಾಡಿ ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಗೆ ತೆರಳುತ್ತಿದ್ದ ನಂ.6 ಖಾಸಗಿ ಬಸ್ ಮೇಲೂ ಕಲ್ಲು ತೂರಾಟ