ಶಿವಮೊಗ್ಗ : ಕಾಂಗ್ರೆಸ್ ರೌಡಿಗಳ ಪಕ್ಷ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದವರು ಎಂದು ಕಾಂಗ್ರೆಸ್ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು.ರೌಡಿಶೀಟರ್ ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆ ವಿಚಾರವಾಗಿ ಕಾಂಗ್ರೆಸ್ ಲೇವಡಿ ಮಾಡಿತ್ತು. ಬಿಜೆಪಿ ರೌಡಿಗಳ ಪಕ್ಷ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿತ್ತು.ಇದಕ್ಕೆ ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ. ನಮ್ಮದು ರೌಡಿಗಳ ಪಕ್ಷ ಅಲ್ಲ. ಸುಸಂಸ್ಕೃತರ ಪಕ್ಷ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ತಿಹಾರ್ ಜೈಲಿನಲ್ಲಿ ಇದ್ದು ಬಂದವರು.