ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿಯ ಕಾರ್ಯಧ್ಯಕ್ಷರಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ರಾಜ್ಯ ಸಚಿವ ಸಂಪುಟದಿಂದ ದಿನೇಶ್ ಗುಂಡೂರಾವ್ ಅವರನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು. ಇದೀಗ, ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ನೀಡುವ ಮೂಲಕ ಪಕ್ಷ ಹೊಸ ಜವಾಬ್ದಾರಿಯನ್ನು ನೀಡಿದ್ದಾರೆ. ಈ