ಬೆಂಗಳೂರು: ಅತ್ತ ಕೇರಳದಿಂದ ಕರ್ನಾಟಕಕ್ಕೆ ಕಾಲಿಟ್ಟು ಪ್ರವಾಹ ಸೃಷ್ಟಿಸುತ್ತಿರುವ ವರುಣನಿಂದಾಗಿ ರಾಜ್ಯಕ್ಕೆ ಪರಿಹಾರ ನೀಡುವಂತೆ ಕೇಂದ್ರಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.ಮಲೆನಾಡು, ಕೊಡಗು ಮತ್ತು ಕರಾವಳಿಯಲ್ಲಿ ಭಾರೀ ಮಳೆಯಿಂದ ಸಾಕಷ್ಟು ನಷ್ಟವಾಗಿದೆ. ಕಾಂಗ್ರೆಸ್ ರಾಜ್ಯ ಸರ್ಕಾರವನ್ನು ಪರಿಹಾರ ನಿಧಿ ಬಿಡುಗಡೆ ಮಾಡಲು ಒತ್ತಡ ಹೇರಲಿದೆ. ಅದೇ ರೀತಿ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ವತಿಯಿಂದ ಹೆಚ್ಚಿನ ಹಣ ಬಿಡುಗಡೆ ಮಾಡಲು ಪ್ರಧಾನಿ ಮೋದಿ ಮೇಲೆ ಒತ್ತಡ ಹೇರಲಿ