ನಟ ಉಪೇಂದ್ರ ಹಾಗೂ ಸಚಿವ ಮಲ್ಲಿಕಾರ್ಜುನ ಅವರ ಹೇಳಿಕೆಗಳ ಬಗೆಗಿನ ದೂರಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಇಬ್ಬರ ಮೇಲೆ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರು ಕೂಡ ಇಂತಹ ಹೇಳಿಕೆಗಳನ್ನು ಸಹಿಸಲ್ಲ. ಹೀಗೆ ಮಾತನಾಡೋರು ಅರ್ಥ ಮಾಡಿಕೊಳ್ಳಬೇಕು. ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡೋದು ಯಾರೇ ಆದರು ನಿಲ್ಲಿಸಬೇಕು. ಗಾದೆ ಇದೆ ಅಂತ ಹೇಳಿ ಕೀಳಾಗಿ