ಲೋಕಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಕಡಗಂಚಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ವಿಮಾನ ನಿಲ್ದಾಣ ಹಾಗೂ ಇ.ಎಸ್.ಐ.ಸಿ. ಆಸ್ಪತ್ರೆಗಳಿಗೆ ಭೇಟಿ ನೀಡಿ ಚರ್ಚಿಸಿತು. ಸಮಿತಿಯು ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳೊಂದಿಗೆ ಅನೌಪಚಾರಿಕ ಚರ್ಚೆ ನಡೆಸಿತು. ನಂತರ ಕಲಬುರಗಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳೊಂದಿಗೆ ವಿಮಾನಯಾನ