ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ರೂಪರೇಷೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಗುವುದು ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖರ ಬಿ. ಪಾಟೀಲ ಹೇಳಿದರು.ಕಲಬುರಗಿ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಕರೆದ ಸಭೆಯನ್ನುದ್ದೇಶಿಸಿ ಮಾತನಾಡಿ, ಹೆಚ್.ಕೆ.ಆರ್.ಡಿ.ಬಿ.ಗೆ ಸರ್ಕಾರ ಅನುಮೋದಿಸಿರುವ ಹಾಗೂ ಬಿಡುಗಡೆಯಾಗಿರುವ ಅನುದಾನದ ಹಾಗೂ ಮಂಡಳಿಯಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಕೊರತೆ