ಬೆಂಗಳೂರು :ನಿಗಮ ಮಂಡಳಿಯಲ್ಲಿ ಲಿಂಗಾಯತರಿಗೆ ಹೆಚ್ಚಿನ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ದಲಿತ ಮತ್ತು ಒಕ್ಕಲಿಗ ಮುಖಂಡರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಸಿದ್ದರಾಮಯ್ಯ ಬಣ ಹಾಗೂ ಡಿ.ಕೆ. ಶಿವಕುಮಾರ್ ಬಣದ ಮುಖಂಡರಿಗೆ ನಿಮಗ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎನ್ನಲಾಗಿದೆ. ಇದು ಸಹಜವಾಗಿಯೇ ಇತರೆ ನಾಯಕರನ್ನು ಕೆರಳಿಸಿದೆ.