ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳು ಆಗಮಿಸುವ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ದಸರಾ ಉದ್ಘಾಟನೆ ಕಾರ್ಯಕ್ರಮದ ವೇದಿಕೆ ಸಿದ್ಧತೆ, ಗಣ್ಯರು, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಕಾರ್ಯಕ್ರಮ ವೀಕ್ಷಣೆ, ಭದ್ರತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಷ್ಟ್ರಪತಿಗಳ ಕಚೇರಿ ಸೂಚನೆಯಂತೆ ಸಿದ್ಧತೆ ಮಾಡಲಾಗುತ್ತಿದೆ. ಸೂಕ್ತ ರೀತಿಯಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ