ಕಲಬುರಗಿ : ಗಂಡನ ಮನೆಯವರ ಕಿರುಕುಳ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಗರದಲ್ಲಿ ನಡೆದಿದೆ. ಈ ದುರಂತದಲ್ಲಿ ತಾಯಿ ಮತ್ತು ಎರಡು ವರ್ಷದ ಮಗಳು ಮೃತಪಟ್ಟಿದ್ದರೆ, ಮೂರು ವರ್ಷದ ಬಾಲಕ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ದೀಕ್ಷಾ ವಸಂತಶರ್ಮಾ (26) ಮತ್ತು ಸಿಂಚನಾ (2) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಟ್ಟು ಗಾಯಗಳಿಂದ ಬಳಲುತ್ತಿರುವ ಬಾಲಕ ಧನಂಜಯ (3)ಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.