ಬೆಂಗಳೂರು : ರೈತರಿಗೆ ಸಿದ್ದರಾಮಯ್ಯ ಸರ್ಕಾರ ಪರಿಹಾರ ನೀಡಿದೆ. ನೀರಾವರಿ ವ್ಯವಸ್ಥೆ ಮಾಡಲಾಗಿದೆ. ಆದರೆ ಬಿಜೆಪಿ ವೃಥಾ ಆರೋಪದಲ್ಲಿ ಕಾಲಹರಣ ಮಾಡುತ್ತಿದೆ ಎಂದ ಡಿಕೆಶಿ, ದೆಹಲಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಂಸದರೂ ಸಹ ಪಾಲ್ಗೊಳ್ಳಲಿ ಎಂದು ಆಹ್ವಾನಿಸಿದರು. ನಮ್ಮದು ಡಬಲ್ ಎಂಜಿನ್ ಸರ್ಕಾರ ಎಂದು ಹೇಳುತ್ತಿದ್ದ ಬಿಜೆಪಿ ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯಕ್ಕೆ ಏನು ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಕನಿಷ್ಠ ಒಂದು ಬರ ಪರಿಹಾರ ಸಭೆ ಕರೆಯಲೂ ಸಹ ಬಿಜೆಪಿಯವರಿಗೆ ಸಾಧ್ಯವಾಗಲಿಲ್ಲ ಎಂದು ಕಿಡಿಕಾರಿದರು.