ಪರಿಸರಕ್ಕೆ ನಾವು ಅಡ್ಜಸ್ಟ್ ಆಗಿಲ್ಲ, ಪರಿಸರವೇ ನಮಗೆ ಅಡ್ಜಸ್ಟ್ ಆಗಿದೆ ಎಂದು ಪರಿಸರ ದಿನದ ಕುರಿತು DCM ಡಿ.ಕೆ.ಶಿವಕುಮಾರ್ ಹೇಳಿದ್ರು.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದೇ ವೇಳೆ BBMP ಅರಣ್ಯ ಇಲಾಖೆ IFS ಅಧಿಕಾರಿ ಸರಿನಾ ಸಿಕ್ಕಲಿಗಾರ್ ಮೇಲೆ ಡಿ.ಕೆ.ಶಿವಕುಮಾರ್ ಗರಂ ಆದ್ರು.ನಿಮ್ಮ ಕೆಲಸ ಸರಿಯಿಲ್ಲ, ಬದಲಾಯಿಸಿಕೊಳ್ಳಿ. ಇಂದು ನನ್ನ ಕೈಯಲ್ಲಿ ಗಿಡ ನೆಡಿಸಿದ ರೀತಿ ಸಂಪೂರ್ಣ ಅವೈಜ್ಞಾನಿಕವಾದದ್ದು. ಕೇವಲ ಫೋಟೋಗೆ ಪೋಸ್ ಕೊಡಲು ಗಿಡ ನೆಡುವುದು ನನಗೆ ಇಷ್ಟವಿಲ್ಲ.