ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ವೈದ್ಯಕೀಯ ಪರೀಕ್ಷೆಗೊಳಪಟ್ಟಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಪಾಸಾಗಿರುವ ಡಿಕೆಶಿಯನ್ನು ಇಂದು ಇಡಿ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.