ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಗೆಲುವು ಸಾಧಿಸಲೇಬೇಕು ಎಂದು ಕಾಂಗ್ರೆಸ್ - ಜೆಡಿಎಸ್ ಪಣ ತೊಟ್ಟಿವೆ. ಕ್ಷೇತ್ರದ ಚುನಾವಣಾ ಉಸ್ತುವಾರಿಯನ್ನು ಕಾಂಗ್ರೆಸ್ ನ ಚಾಣಕ್ಯ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಅವರ ಹೆಗಲಿಗೆ ವಹಿಸಲಾಗಿದೆ ಎಂಬ ಮಾತು ಇದೀಗ ಕೇಳಿ ಬರುತ್ತಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ರಾಘವೇಂದ್ರ ಈ ಬಾರಿಯ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಇನ್ನು ಕಾಂಗ್ರೆಸ್ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು, ಮೈತ್ರಿ