ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಬೆಂಬಲಿಗರು ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.ನವದೆಹಲಿಯಲ್ಲಿ ನಿನ್ನೆ ವಿಶೇಷ ಕೋರ್ಟ್ ಗೆ ಹಾಜರಾದ ಡಿಕೆ ಶಿವಕುಮಾರ್ ರನ್ನು ಸೆಪ್ಟೆಂಬರ್ 13 ರವರೆಗೂ ಇಡಿ ಸುಪರ್ದಿಗೆ ಒಪ್ಪಿಸಲಾಗಿತ್ತು. ಈ ಹಿನ್ನಲೆಯಲ್ಲಿ ಇದೆಲ್ಲಾ ಕೇಂದ್ರ ಸರ್ಕಾರದ ಪಿತೂರಿ ಎಂದು ಡಿಕೆಶಿ ಬೆಂಬಲಿಗರು ನಿನ್ನೆ ಕನಕಪುರ ಸುತ್ತಮುತ್ತಲ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದರು.ಇಂದು ಸಿಎಂ