ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ದೆಹಲಿಗೆ ಮಾತ್ರ ಸೀಮಿತವಲ್ಲ. ರಾಜ್ಯದವರಾದ ನೀವು ರಾಜ್ಯ ರಾಜಕಾರಣದಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ ಅವರು ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚು ಕೆಲಸ ಮಾಡಿ ಪ್ರಚಾರ ನಡೆಸಬೇಕು. ದೆಹಲಿಗೆ ಮಾತ್ರ ಸೀಮಿತವಾಗಬೇಡಿ ಎಂದಿದ್ದಾರೆ. ದೆಹಲಿಯಲ್ಲಿ ಮಾತ್ರ ರಾಜಕೀಯ ಮಾಡದೇ ಕರ್ನಾಟಕದ ಕಡೆಗೂ ಗಮನಹರಿಸಲು