ರಾಮನಗರದ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಸಹೋದರ ಸಿ.ಪಿ.ರಾಜೇಶ್ ಜಿಪಂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಫರ್ಮಾನ್ ಹೊರಡಿಸಿರುವುದರಿಂದ ಇಬ್ಬರ ಮಧ್ಯೆ ಬಿರುಕು ಉಂಟಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ನಾಳೆ ಸಂಜೆಯೊಳಗೆ ಸಿ.ಪಿ.ರಾಜೇಶ್ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ನಾಲ್ಕು ತಾಲೂಕುಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನ ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ರಾಜೇಶ್