ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು| pavithra| Last Modified ಗುರುವಾರ, 2 ಜುಲೈ 2020 (09:44 IST)
ಬೆಂಗಳೂರು : ಕೆಪಿಸಿಸಿಯ 41ನೇ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಗೆ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದು ಕೆಪಿಸಿಸಿಯ ಕಚೇರಿಯಲ್ಲಿ ಬೆಳಿಗ್ಗೆ 11.30ಕ್ಕೆ  ಪ್ರತಿಜ್ಞಾ ವಿಧಿ ಸ್ವೀಕಾರ ನಡೆಯಲಿದೆ. ಅದಕ್ಕಾಗಿ ಕೆಪಿಸಿಸಿಯ ಕಚೇರಿಯನ್ನು ಸಜ್ಜುಗೊಳಿಸಲಾಗಿದೆ.

ಕೊರೊನಾ ಹಿನ್ನಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ 15ಒ ಮಂದಿಗೆ ಮಾತ್ರ ಆಸನ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳಿಗೆ ಈ ಕಾರ್ಯಕ್ರಮ ವೀಕ್ಷಣೆ ಮಾಡಲು ಸುಮಾರು 7800 ಸ್ಥಳಗಳಲ್ಲಿ ಎಲ್ ಇಡಿ ಅಳವಡಿಸಲಾಗಿದೆ. ಜೊತೆಗೆ ಫೇಸ್ ಬುಕ್ ಲೈವ್, ಜೂಮ್ ಕಾನ್ಫರೆನ್ಸ್ ಮೂಲಕ ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :