ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ ಕರೆದಿರುವುದು ಕುತೂಹಲ ಮೂಡಿಸಿದೆ. ಮಂಡ್ಯ ಕಾಂಗ್ರೆಸ್ ಮುಖಂಡರ ಸಭೆಯನ್ನು ಸಚಿವ ಡಿಕೆ ಶಿವಕುಮಾರ ಕರೆದಿದ್ದಾರೆ. ನಾಳೆ ಸಂಜೆ 5 ಕ್ಕೆ ನಡೆಯಲಿರುವ ಸಭೆಯಲ್ಲಿ ಜಿಲ್ಲೆಯ ಪ್ರಮುಖ ಕೈ ನಾಯಕರು ಪಾಲ್ಗೊಳ್ಳಲಿದ್ದಾರೆ.ಬೆಂಗಳೂರಿನ ಕ್ರೆಸೆಂಟ್ ರಸ್ತೆಯ ಡಿಕೆ ಶಿವಕುಮಾರರ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿದೆ. ಸುಮಲತಾ ಸ್ಪರ್ಧೆ, ರೇವಣ್ಣ ಹೇಳಿಕೆಯಿಂದ ಗೊಂದಲ ಉಂಟಾಗಿರುವುದು ಸಭೆಯಲ್ಲಿ ಚರ್ಚೆಗೆ ಬರಲಿದೆ. ಮಂಡ್ಯ ಕಾಂಗ್ರೆಸ್