ಬೆಂಗಳೂರು : ವಿಧಾನಸಭೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ನಡುವೆ ಮಾತಿನ ಯುದ್ಧ ನಡೆದಿದೆ. ಈಶ್ವರಪ್ಪ ರಾಷ್ಟ್ರದ್ರೋಹಿ ಎಂದು ಡಿಕೆಶಿ ಕೂಗುತ್ತಿದ್ದಂತೆ ಈಶ್ವರಪ್ಪ ನಾನಲ್ಲ ರಾಷ್ಟ್ರದ್ರೋಹಿ ನೀನು ಎಂದು ವಾಗ್ದಾಳಿ ನಡೆಸಿದ್ದಾರೆ.ವಿಧಾನಸಭೆಯಲ್ಲಿ ಇಂದು ಈಶ್ವರಪ್ಪ ಮತ್ತು ಡಿಕೆ ಶಿವಕುಮಾರ್ ಇಬ್ಬರು ನಾಯಕರು ಮಾತಿನ ಜಗಳಕ್ಕೆ ಇಳಿದ ಪ್ರಸಂಗ ನಡೆಯಿತು. ಕೆಲದಿನಗಳ ಹಿಂದೆ ಈಶ್ವರಪ್ಪ ರಾಷ್ಟ್ರಧ್ವಜದ ಬಗ್ಗೆ ನೀಡಿದ ಹೇಳಿಕೆ ಇಂದು