ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಮಲ್ಲಿಕಾರ್ಜುನ್ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರಾಗಿದ್ದಾರೆ ನಾನು ಹೊಸ ವರ್ಷದ ಶುಭಾಶಯ ಕೋರಲು ಬಂದಿದ್ದೇನೆ. ನಾವೆಲ್ಲ ಒಟ್ಟಿಗೆ ದುಡಿದು ನಾವು ಕಾಂಗ್ರೆಸ್ ಅಧಿಕಾರಕ್ಕೆ ತರುತ್ತೇವೆ ಜನ ಬದಲಾವಣೆ ಬಯಸುತ್ತಿದ್ದಾರೆ. ಅದರಂತೆ ನಾವು ಕಾಂಗ್ರೆಸ್ ಪಕ್ಷ ವನ್ನ ಅಧಿಕಾರಕ್ಕೆ ಬರುತ್ತೆ.