ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡು ಮೂರು ದಿನಗಳು ಕಳೆದಿವೆ. ಆದರೂ ಬಹುಮತ ಪಡೆದುಕೊಂಡಿರುವ ಕಾಂಗ್ರೆಸ್ ಇದುವರೆಗೂ ಸಿಎಂ ಯಾರು ಎನ್ನುವುದನ್ನು ಘೋಷಣೆ ಮಾಡಿಲ್ಲ. ಸಿಎಂ ಕುರ್ಚಿಗಾಗಿ ಪಟ್ಟು ಅಂದ್ರೆ ಪಟ್ಟು. ಸಿದ್ದರಾಮಯ್ಯ ಬಿಡುತ್ತಿಲ್ಲ. ಇತ್ತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಸೈಡಿಗೆ ಸರಿಯುತ್ತಿಲ್ಲ. ಹೀಗಾಗಿ ಹೈಕಮಾಂಡ್ಗೂ ಸಿಎಂ ಆಯ್ಕೆ ಕಗ್ಗಂಟಾಗಿದೆ. ನಾನು ಅಧ್ಯಕ್ಷನಾಗಿ ಪಕ್ಷ ಅಧಿಕಾರಕ್ಕೆ ತಂದಿರುವ ಕಾರಣ ನನ್ನನ್ನು ಮುಖ್ಯಮಂತ್ರಿ ಮಾಡಬೇಕು. 50:50 ಸೂತ್ರವನ್ನು ನಾನು