4ನೇ ದಿನವೂ ಸಚಿವ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಐಟಿ ಅಧಿಕಾರಿಗಳ ತನಿಖೆ ಮುಂದುವರೆದಿದೆ. ಈ ಮಧ್ಯೆ 3 ದಿನಗಳಿಂದ ಹೊರಗೆ ಕಾಣಿಸಿಕೊಳ್ಳದ ಸಚಿವ ಡಿ.ಕೆ. ಶಿವಕುಮಾರ್ ಇವತ್ತು ಬಾಲ್ಕನಿಯಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಕಡೆ ಕೈಬೀಸಿದ್ದಾರೆ. ಬೆಳಗ್ಗೆ 6.30ರ ಸುಮಾರಿಗೆ ಬಾಲ್ಕನಿಯಲ್ಲಿ ಕಾಣಿಸಿಕೊಂಡ ಡಿ.ಕೆ. ಶಿವಕುಮಾರ್ ಅಭಿಮಾನಿಗಳತ್ತ ಕೈಬೀಸಿದ್ದಾರೆ. 4 ದಿನಗಳಿಂದ ಮನೆ ಮುಂದೆಯೇ ಕುಳಿತಿರುವ ಅಭಿಮಾನಿಗಳ ನೋಡಿದ ಶಿವಕುಮಾರ್, ತೆರಳುವಂತೆ ಕೈಬೀಸಿ ಸೂಚಿಸಿದ್ದಾರೆ. ಬಳಿಕ ಎಂದಿನಂತೆ ಒಳಗೆ ತೆರಳಿ ವಿಚಾರಣೆಗೆ