ರಾಜ್ಯಸಭೆ ಚುನಾವಣೆಯ ಕುದುರೆ ವ್ಯಾಪಾರದಿಂದ ಪಾರಾಗಲು ರಾಜ್ಯಕ್ಕೆ ಬಂದ ಗುಜರಾತ್`ನ 44 ಕಾಂಗ್ರೆಸ್ ಶಾಸಕರಿಗೆ ರಕ್ಷಣೆ ನೀಡಿದ್ದು ಸಚಿವ ಡಿ.ಕೆ. ಶಿವಕುಮಾರ್. ಐಟಿ ದಾಳಿ ನಡೆದರೂ ವಿಚಲಿತರಾಗದೇ ಶಾಸಕರನ್ನ ಸುರಕ್ಷಿತವಾಗಿ ಆಗಸ್ಟ್ 7ರಂದು ಅಹಮದಾಬಾದ್`ಗೆ ಕಳುಹಿಸಿಕೊಟ್ಟಿದ್ದರು. ಪಕ್ಷ ನಿಷ್ಠೆ ಮೆರೆದ ಡಿ.ಕೆ. ಶಿವಕುಮಾರ್ ಅವರಿಗೆ ಹೈಕಮಾಂಡ್ ಭಾರೀ ಗಿಫ್ಟ್ ನೀಡುವ ಸಾಧ್ಯತೆ ಇದೆ ಮಾಧ್ಯಮಗಳು ವರದಿ ಮಾಡಿವೆ. ಮಾಧ್ಯಮಗಳ ವರದಿಗಳ ಪ್ರಕಾರ, ಡಿಸೆಂಬರ್`ನಲ್ಲಿ ನಡೆಯಲಿರುವ ಗುಜರಾತ್ ಚುನಾವಣಾ ಉಸ್ತುವಾರಿಯಾಗಿ ಡಿ.ಕೆ.