ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನನ್ನ ಬಳಿ ಭಿಕ್ಷೆ ಬೇಡಿ ಬಂದಿದ್ದರು ಎಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಶಾಸಕ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಕಳೆದ ಲೋಕಸಭೆ ಉಪ ಚುನಾವಣೆಯಲ್ಲಿ ಡಿಕೆಶಿ ಸಹೋದರ ಸುರೇಶ್ ಚುನಾವಣೆಗೆ ಸ್ಪರ್ಧಿಸಿದಾಗ ನನ್ನ ಬಳಿ ಬಂದ ಸಚಿವ ಡಿ.ಕೆ.ಶಿವಕುಮಾರ್, ನನಗೆ ಸಹಾಯ ಮಾಡಿ ಚುನಾವಣೆ ಗೆದ್ದಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ, ಮುಖ್ಯಮಂತ್ರಿಯಾಗುತ್ತೇನೆ. ನಿಮ್ಮನ್ನು ಸಚಿವರನ್ನಾಗಿ ಮಾಡುತ್ತೇನೆ ಎಂದು ಭಿಕ್ಷೆ ಕೇಳಲು ಬಂದಿದ್ದರು ಎಂದು ಆರೋಪಿಸಿದ್ದಾರೆ.