ಪ್ರಧಾನಿ ಮೋದಿಯ ಹಿಂದಿ ಭಾಷಣ ಕೇಳಿ ಮರುಳಾಗಬೇಡಿ. ನನಗೆ ಕೆಲಸ ಮಾಡಲು ಅವಕಾಶ ಕೊಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಕುಮಾರಪರ್ವ ಸಮಾವೇಶದಲ್ಲಿ ಪಕ್ಷದ ಅಭಿಮಾನಿಗಳನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆದ್ದಿತು ಎನ್ನುವುದು ನನಗೆ ಗೊತ್ತಿದೆ. ಪೊಲೀಸ್ ಜೀಪಿನಲ್ಲಿಯೇ ಹಣ ಸಾಗಿಸಿ ಪಕ್ಷವನ್ನು ಗೆಲ್ಲಿಸಿದ್ದಾರೆ ಎಂದು ಆರೋಪಿಸಿದರು. ಸಿಎಂ ಸಿದ್ದರಾಮಯ್ಯ ಬಳಿ ಹಣಕ್ಕೇನು ಕೊರತೆಯಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಯಗಳಿಸಲು ನೂರಾರು