ಜೈಲಿಗೆ ಹೋಗಿ ಬಂದವರಿಗೆ ಅಧಿಕಾರ ನೀಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾಗರ ನಗರದಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಬಹಳಷ್ಟು ನಾಯಕರು ಜೈಲಿಗೆ ಹೋಗಿ ಬಂದಿದ್ದಾರೆ. ಆದ್ದರಿಂದ ಅಂತಹವರಿಗೆ ಅಧಿಕಾರ ನೀಡಬೇಡಿ ಎಂದು ತಿಳಿಸಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಕರ್ನಾಟಕದ ಇತಿಹಾಸದಲ್ಲಿ ಮುಖ್ಯಮಂತ್ರಿ ಜೈಲಿಗೆ