ಬೆಂಗಳೂರು : ಚುನಾವಣಾ ಕೆಲಸಗಳಿಗೆ ಶಿಕ್ಷಕರನ್ನು ಬಳಸಬೇಡಿ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕರ್ನಾಟಕ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಈ ವಿಚಾರವನ್ನು ಪತ್ರದ ಮೂಲಕ ತಿಳಿಸಿರುವ ಅವರು, ಚುನಾವಣಾ ಪ್ರಕ್ರಿಯೆ ಸೇರಿದಂತೆ ಹಲವು ಕೆಲಸಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಪಾಠಗಳು ಸರಿಯಾಗಿ ಸಮಯಕ್ಕೆ ಮುಗಿಯುತ್ತಿಲ್ಲ. ಶಿಕ್ಷಕರಿಗೆ ಶಾಲಾ ಚಟುವಟಿಕೆಗಳಿಗೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಆದಕಾರಣ ಚುನಾವಣಾ ಕೆಲಸಗಳಿಗೆ ಶಿಕ್ಷಕರನ್ನು ಬಳಸಬೇಡಿ ಎಂದು ಕರ್ನಾಟಕ