ಇಂಧನ ಸಚಿವ ಡಿ.ಕೆ.ಶಿವಕುಮಾಪ್ ನಿವಾಸದ ಮೇಲೆ ನಡೆದ ಐಟಿ ದಾಳಿ ಕುರಿತಂತೆ ಯಾವುದೇ ಪ್ರತಿಕ್ರಿಯೆ ನೀಡಬೇಡಿ ಎಂದು ಬಿಜೆಪಿ ಹೈಕಮಾಂಡ್ ಕಟ್ಟಾಜ್ಞೆ ಹೊರಡಿಸಿದೆ. ರಾಜ್ಯ ಬಿಜೆಪಿ ನಾಯಕರು ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಲ್ಲದೇ, ಯಾವುದೇ ಮಾಧ್ಯಮದಲ್ಲಿ ಚರ್ಚಾಕೂಟದಲ್ಲಿ ಪಾಲ್ಗೊಳ್ಳಬಾರದು ಎಂದು ಆದೇಶ ಹೊರಡಿಸಿದೆ. ಇಂದು ಬೆಳಿಗ್ಗೆ ಏಕಕಾಲದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸಗಳ ಮೇಲೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ