ಬೆಂಗಳೂರು: ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಸಚಿವ ರೋಷನ್ ಬೇಗ್ ಕೈವಾಡವಿದೆ ಎನ್ನುವುದಕ್ಕೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಬಳಿ ಸಾಕ್ಷಿ ಇದೆಯೇ? ಕೇವಲ ರಾಜಕೀಯ ಬೇಳೆ ಬೇಯಸಿಕೊಳ್ಳಲು ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.