ಬೆಂಗಳೂರು : ಸ್ಪಂದಿಸುವುದು ನಿಮ್ಮ ಕರ್ತವ್ಯ. ಎಷ್ಟು ಸಾಧ್ಯವೋ ಅಷ್ಟು ಪಕ್ಷದ ಶಾಸಕರ ಕೆಲಸ ಮಾಡಿಕೊಡಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟದ ಸದಸ್ಯರಿಗೆ ಹೇಳಿದ್ದಾರೆ. ಗುರುವಾರ ನಡೆದ ಸಂಪುಟ ಸಭೆ ಬಳಿಕ ನಡೆದ ಅನೌಪಚಾರಿಕ ಸಭೆಯಲ್ಲಿ ಪತ್ರದ ಬಗ್ಗೆ ವಿಸ್ತ್ರತ ಚರ್ಚೆ ನಡೆದಿದೆ. ಈ ವಿಚಾರದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕರು ಬಹಿರಂಗವಾಗಿ ಪತ್ರ ಬರೆಯಬಾರದಿತ್ತು. ಬರೆದಿದ್ದು ತಪ್ಪು. ಇನ್ನು ಮುಂದೆ ಹಾಗೆ ನಡೆದುಕೊಳ್ಳದಂತೆ ಸೂಚನೆ