ಚೆಕ್ ಪೋಸ್ಟ್ ಗಳಲ್ಲಿ ಕಡ್ಡಾಯವಾಗಿ ಈ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ಖಡಕ್ ಸೂಚನೆ ಕೊಟ್ಟಿದ್ದಾರೆ. ಕೊರೊನಾ ವೈರಸ್ ತಡೆ ಹಿನ್ನೆಲೆ ಉಡುಪಿ ಜಿಲ್ಲೆಗೆ ಹೊರ ಜಿಲ್ಲೆಯಿಂದ ಬರುವ ವಾಹನಗಳು ಮತ್ತು ಪ್ರಯಾಣಿಕರನ್ನು ನಿರ್ಭಂದಿಸಲಾಗಿದೆ. ತುರ್ತು ವೈದ್ಯಕೀಯ ಸೇವೆ ಅಗತ್ಯವಿರುವ ವ್ಯಕ್ತಿಗಳಿಗೆ ಮತ್ತು ಸರಕು ಸಾಮಗ್ರಿ ಸಾಗಿಸುವ ವಾಹನಗಳಿಗೆ ಮಾತ್ರ ಪ್ರವೇಶ ನೀಡಿದ್ದು, ಇತರೆ ಜಿಲ್ಲೆಗಳಿಂದ ಪಾಸ್ ಪಡೆದು ಜಿಲ್ಲೆಗೆ ಬರಲು ಯತ್ನಿಸುವವರ ಪಾಸ್ ಗಳನ್ನು ಯಾವುದೇ ಕಾರಣಕ್ಕೂ ಮಾನ್ಯ ಮಾಡುವುದಿಲ್ಲ