Widgets Magazine

ಮನೆಯಲ್ಲಿ ಯಾರೂ ಇಲ್ಲದಾಗ ಇಂಥ ಕೆಲಸ ಮಾಡೋದಾ

ಹುಬ್ಬಳ್ಳಿ| Jagadeesh| Last Modified ಶನಿವಾರ, 14 ಡಿಸೆಂಬರ್ 2019 (16:48 IST)
ಮನೆಯಲ್ಲಿ ಯಾರೂ ಇಲ್ಲದಾಗ ಮಾಡಬಾರದ ಕೆಲಸ ಮಾಡಲಾಗಿದೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಹಿಂದಿನ ಬಾಗಿಲನ್ನು ಮುರಿದು ಒಳಗೆ ನುಗ್ಗಿದ ಕಳ್ಳರು, ಅಪಾರ ಪ್ರಮಾಣದ ಹಾಗೂ ಹಣವನ್ನು ಕದ್ದು ಪರಾರಿಯಾಗಿದ್ದಾರೆ.

ಈ ಘಟನೆ ಹುಬ್ಬಳ್ಳಿಯ ಆನಂದನಗರ ರಸ್ತೆಯಲ್ಲಿರುವ ಗಣೇಶನಗರ ಎರಡನೇ ಕ್ರಾಸ್ ಮನೆ ನಂ.38ರಲ್ಲಿ ನಡೆದಿದೆ.

ಇಂದಿರಾಬಾಯಿ ಹಳಿಯಾಳ ಅವರಿಗೆ ಸೇರಿದ ಮನೆಯಾಗಿದ್ದು, ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮನೆಗೆ ಲಗ್ಗೆ ಇಟ್ಟ ಖದೀಮರು, ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.

ಚಿನ್ನಾಭರಣ ಹಾಗೂ ನಗದು ಪ್ರಮಾಣದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಇಂಡಿಪಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದರಲ್ಲಿ ಇನ್ನಷ್ಟು ಓದಿ :