ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಗಳಿಸಿರುವ ಮಳವಳ್ಳಿ ಹುಚ್ಚೇಗೌಡ ಅಮರನಾಥ್ (ಅಂಬರೀಶ್) ಅವರು ಜನಿಸಿದ್ದು 29 ಮೇ 1952 ಮಂಡ್ಯ ಜಿಲ್ಲೆಯ ದೊಡ್ದರೆಸಿಕೆರೆಯಲ್ಲಿ. ತಂದೆ ಹುಚ್ಚೇಗೌಡ ತಾಯಿ ಪದ್ಮಮ್ಮ. ಬಾಲ್ಯ ವಿದ್ಯಾಬ್ಯಾಸ ಮುಗಿಸಿದ್ದು ಮಂಡ್ಯದಲ್ಲಿ. ಪದವಿ ಶಿಕ್ಷಣವನ್ನು ಮೈಸೂರಿನಲ್ಲಿ ಪಡೆದುಕೊಂಡಿದ್ದರು. ಅಂಬರೀಶ್ ಅವರು 1991 ರಲ್ಲಿ ಕನ್ನಡದ ಖ್ಯಾತ ನಟಿ ಸುಮಲತಾ ಅವರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿದ್ದರು.