ಎಸ್ ಎಸ್ ಎಲ್ ಸಿ ಓದುತ್ತಿದ್ದ 15 ವರ್ಷದ ಬಾಲಕಿಯನ್ನು ಅಪಹರಿಸಿ ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಬರ್ಬರ ಕೊಲೆಯಾಗಿದೆ.ಬಾಲಕಿಯೊಬ್ಬಳನ್ನು ಅಪರಿಚಿತ ಯುವಕರು ಕಲ್ಲಿನಿಂದ ಜಜ್ಜಿ ಅಮಾನುಷವಾಗಿ ಕೊಲೆಗೈದಿರುವ ಘಟನೆಯು ಮಾಲೂರು ಪಟ್ಟಣದಲ್ಲಿ ನಡೆದಿದೆ.ಶಾಲೆ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಮೃತಪಟ್ಟ ಬಾಲಕಿಯನ್ನು ರೈಲ್ವೇ ನಿಲ್ದಾಣದ ಸಮೀಪ ಇರುವ ಇಂದಿರಾನಗರದ ರಕ್ಷಿತಾ(15) ಎಂದು ಗುರುತಿಸಲಾಗಿದೆ. ಪಟ್ಟಣದ ರೈಲ್ವೇ ನಿಲ್ದಾಣದ ಸಮೀಪ