ಶಾಸಕರು ಕೇವಲ ಹೈಟೆಕ್ ಹೋಟೆಲ್ ನಲ್ಲಿ ಊಟ, ತಿಂಡಿ ಮಾಡುತ್ತಾರೆ. ಬಡವರ ಬಗ್ಗೆ ಅವರಿಗೆ ಕಾಳಜಿ ಇಲ್ಲ. ನಾವು ತಿನ್ನುವ ತಿಂಡಿ, ಊಟದ ಗುಣಮಟ್ಟ ಹೇಗಿದೆ ಎಂದು ತಿಳಿದುಕೊಳ್ಳಲು ಅವರ ಕೈಯಲ್ಲಿ ಸಾಧ್ಯವಾಗುವುದಿಲ್ಲ ಎನ್ನುವವರ ನಡುವೆ ಶಾಸಕರೊಬ್ಬರು ಮಾದರಿಯಾಗಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಶಾಸಕ ಬೆಳ್ಳಿ ಪ್ರಕಾಶ್, ಐ ಆ್ಯಮ್ ಎ ಡಿಫರೆಂಟ್ ಎಂಬಂತೆ ತಮ್ಮದೆಯಾದ ಶೈಲಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಕಡೂರು ಪಟ್ಟಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ರಾಜ್ಯ ಸರ್ಕಾರದ ಆಡಳಿತದಲ್ಲಿರುವ ಇಂದಿರಾ