ರಾಜ್ಯ ರಾಜಕೀಯ ಹಾಗೂ ಪರಿಷತ್ ಮೆಗಾಫೈಟ್ ನಡೆಯುತ್ತಿರುವ ಈ ಸಂದರ್ಭದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ್ ಅವರು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ.ಮಂಡ್ಯದಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರನ್ನು ಪ್ರತಾಪ್ ಸಿಂಹ ಭೇಟಿಯಾದರು. ಭೇಟಿ ನಂತರ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದು, ಇತ್ತೀಚೆಗೆ ಪ್ರಧಾನಿ ಮೈಸೂರಿಗೆ ಭೇಟಿ ನೀಡಿದಾಗ ಮೈಸೂರು- ಬೆಂಗಳೂರು ಎಕ್ಸ್ಪ್ರೆಸ್ ಹೈವೆಗೆ ಅನುಮತಿ ನೀಡಿದ್ದರು. ಆದರೆ ಇದಕ್ಕೆ ಕೆಲ ಮರಗಳನ್ನು ನಾಶ ಮಾಡಬೇಕೆಂಬ ಬಗ್ಗೆ ವರದಿ ಆಗಿತ್ತು.