ಬೆಂಗಳೂರು,ಆ.22 : ಕೋವಿಡ್ 3ನೇ ಅಲೆಯ ಆತಂಕದ ನಡುವೆಯೇ ನಾಳೆಯಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲಾಕಾಲೇಜುಗಳು ತೆರೆಯುತ್ತಿದ್ದು, 9ರಿಂದ 12ನೇ ತರಗತಿಗಳು ಪ್ರಾರಂಭವಾಗಲಿವೆ.ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಗಳಲ್ಲಿನ 9 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಶಾಲಾ-ಕಾಲೇಜುಗಳು ಆರಂಭಗೊಳ್ಳಲಿವೆ. 16,850 ಪ್ರೌಢಶಾಲೆಗಳ ಜೊತೆಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿಯ 5,492 ಪಿಯು ಕಾಲೇಜುಗಳು ಆರಂಭವಾಗುತ್ತಿದ್ದು, ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸುರಕ್ಷತೆಗಾಗಿ ವಿಸ್ತೃತ ಎಸ್ಒಪಿ (ಪ್ರಮಾಣಿತ