ಹೆಣ್ಣು ಮಗು ಎಂಬ ಕಾರಣಕ್ಕೆ ಹೆತ್ತ ತಾಯಿಯೇ ತನ್ನ ಮೂರು ತಿಂಗಳ ಹೆಣ್ಣು ಮಗುವನ್ನು ರೈಲ್ವೆ ನಿಲ್ದಾಣದಲ್ಲಿ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ.ಯಾದಗಿರಿ ರೈಲ್ವೆ ನಿಲ್ದಾಣದ ರೈಲ್ವೆ ಸೇತುವೆ ಕೆಳಭಾಗದಲ್ಲಿ ನಸುಕಿನ ಜಾವ ಹೆಣ್ಣು ಮಗು ಪತ್ತೆಯಾಗಿದೆ. ಮಗು ಹೆತ್ತಮ್ಮಳ ಮಡಿಲಲ್ಲಿ ಸೇರಲು ಹಂಬಲಿಸಿ ರೋಧಿಸುತ್ತಿತ್ತು.ಮಗುವಿನ ಅಕ್ರಂದನ ಕೇಳಿದ ರೈಲ್ವೆ ಸುರಕ್ಷ ಬಲದ ಪೊಲೀಸ್ ಅಧಿಕಾರಿಗಳು ಕೂಡಲೇ ಮಗುವನ್ನು ರಕ್ಷಣೆ ಮಾಡಿದ್ದಾರೆ. ನಂತರ ಮಗುವನ್ನು ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಹಸ್ತಾಂತರ