ಚುನಾವಣೆಯಲ್ಲಿ ಹಲವು ಅಕ್ರಮಗಳನ್ನು ಮಾಡುತ್ತಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಲೇ ಇದ್ದಾರೆ.ಚುನಾವಣೆ ಹೊತ್ತಲ್ಲಿ ಅಬಕಾರಿ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಂಡಕಾಪುರ್ ಚೆಕ್ ಪೋಸ್ಟ್ ನಲ್ಲಿ ತಪಾಸನೆ ವೇಳೆ ಅಪಾರ ಪ್ರಮಾಣದ ಮದ್ಯ ವಶಕ್ಕೆ ತೆಗೆದುಕೊಳ್ಳಲಾಗಿದೆ. ತಪಾಸಣೆ ವೇಳೆ ಸಿಕ್ಕ ಕೋಟ್ಯಂತರ ಮೌಲ್ಯದ ಮದ್ಯ ವಶಕ್ಕೆ ಪಡೆದುಕೊಂಡಿರುವ ಅಬಕಾರಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ.ಅಕ್ರಮವಾಗಿ ಸಾಗಿಸುತ್ತಿದ್ದ 2,52,07,968 ರೂ. ಮೌಲ್ಯದ ಅಕ್ರಮ ಮದ್ಯ ವಶವಾಗಿದೆ. ಕಂಟೈನರ್ ಮೂಲಕ